ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಆತಂಕದ ನಡೆವೆಯೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಭದ್ರಾವತಿಯಲ್ಲಿ ಶನಿವಾರ ವಿನೂತನ ರೀತಿಯ ಪ್ರತಿಭಟನೆ ಕೈಗೊಳ್ಳುವ ಮೂಲಕ ಗಮನ ಸೆಳೆದರು.
ಭದ್ರಾವತಿ, ಮೇ. ೧೫: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಆತಂಕದ ನಡೆವೆಯೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಶನಿವಾರ ವಿನೂತನ ರೀತಿಯ ಪ್ರತಿಭಟನೆ ಕೈಗೊಳ್ಳುವ ಮೂಲಕ ಗಮನ ಸೆಳೆದರು.
ಲಾಕ್‌ಡೌನ್ ಹಿನ್ನಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಕನಿಷ್ಠ ೩ ತಿಂಗಳು ಮಾಸಿಕ ೧೦ ಸಾವಿರ ರು. ಪರಿಹಾರ ನೀಡುವುದು, ಕೊರೋನಾ ಪೀಡಿತ ಕಟ್ಟಡ ಕಾರ್ಮಿಕರಿಗೆ ಹಾಗು ಕುಟುಂಬ ವರ್ಗದವರಿಗೆ ಉಚಿತ ಚಿಕಿತ್ಸೆ ನೀಡುವುದು ಹಾಗು ಕೊರೋನಾ ಸೋಂಕಿನಿಂದ ಮೃತಪಟ್ಟ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ರು. ೧೦ ಲಕ್ಷ ಹಾಗು ನೋಂದಾಯಿತರಲ್ಲದ ಕಾರ್ಮಿಕರಿಗೆ ರು. ೫ ಲಕ್ಷ ಪರಿಹಾರ ನೀಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ 'ಮನೆ ಮನೆಗಳಲ್ಲಿ ಪ್ರತಿಭಟನೆ' ಎಂಬ ವಿನೂತನ ಶೈಲಿಯ ಹೋರಾಟದ ಮೂಲಕ ಆಗ್ರಹಿಸಲಾಯಿತು. ರಾಜ್ಯಾದ್ಯಂತ ಈ ವಿನೂತನ ಪ್ರತಿಭಟನೆ ನಡೆದಿದ್ದು, ತಾಲೂಕಿನ ಹಲವೆಡೆ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ನಗರದ ಕೂಲಿಬ್ಲಾಕ್ ಶೆಡ್ ಆಂಜನೇಯ ಅಗ್ರಹಾರದ ಶ್ರೀ ಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಕರ್ನಾಟಕ ರಾಜ್ಯ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಮುಂಭಾಗ ಅಧ್ಯಕ್ಷ ನಾಗರಾಜ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಎಂ.ಪಿ ನಾರಾಯಣಸ್ವಾಮಿ, ತಾಂತ್ರಿಕ ಸಲಹೆಗಾರ ಕೆ.ಪಿ ಮೋಹನ್, ಗೌರವಾಧ್ಯಕ್ಷ ಅಂತೋಣಿ ಕ್ರೂಸ್, ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುಂದರ್ ಬಾಬು, ಜಿಲ್ಲಾ ಉಪಾಧ್ಯಕ್ಷ ಕೆ. ಚಂದ್ರಶೇಖರ್, ತಾಲೂಕು ಪದಾಧಿಕಾರಿಗಳಾದ ಸುಬ್ರಮಣ್ಯ, ಅಭಿಲಾಷ್, ನಾಗೇಂದ್ರರೆಡ್ಡಿ, ಶಿವಕುಮಾರ್, ಮಂಜಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment