ಭದ್ರಾವತಿ ನಗರಸಭೆ ಗುತ್ತಿಗೆ ಪೌರ ನೌಕರನ ಹತ್ಯೆ ಪ್ರಕರಣದ ತನಿಖೆಯನ್ನು ಪ್ರಾಮಾಣಿಕವಾಗಿ ಕೈಗೊಳ್ಳುವ ಜೊತೆಗೆ ಹತ್ಯೆಗೆ ಕುಮ್ಮಕ್ಕು ನೀಡಿರುವವರ ವಿರುದ್ಧ ಸಹ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮೇ. ೨೮: ನಗರಸಭೆ ಗುತ್ತಿಗೆ ಪೌರ ನೌಕರನ ಹತ್ಯೆ ಪ್ರಕರಣದ ತನಿಖೆಯನ್ನು ಪ್ರಾಮಾಣಿಕವಾಗಿ ಕೈಗೊಳ್ಳುವ ಜೊತೆಗೆ ಹತ್ಯೆಗೆ ಕುಮ್ಮಕ್ಕು ನೀಡಿರುವವರ ವಿರುದ್ಧ ಸಹ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಕೊರೋನಾ ವೈರಸ್ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಈ ರೀತಿಯ ಘಟನೆ ನಡೆದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ಸಮರ್ಥವಾಗಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿದೆ. ಬಹುತೇಕ ಸ್ಥಳೀಯ ಪೊಲೀಸ್ ಅಧಿಕಾರಿಗಳು ಇಲ್ಲಿನ ಜನಪ್ರತಿನಿಧಿಗಳು ಹೇಳಿದಂತೆ ಕೇಳುತ್ತಾರೆ. ಇದರಿಂದಾಗಿ ಕ್ಷೇತ್ರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರಿಗೆ ಹಾಗು ಕುಮ್ಮಕ್ಕು ನೀಡುವವರಿಗೆ ಯಾವುದೇ ಭಯವಿಲ್ಲದಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಕ್ಷೇತ್ರದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ನಮ್ಮ ಜವಾಬ್ದಾರಿಯಾಗಿದೆ. ಈಗಾಗಲೇ ಈ ಪ್ರಕರಣ ಕುರಿತು ಸಮಗ್ರ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಸದರಿಗೆ ತಿಳಿಸಲಾಗಿದೆ. ಮುಂದಿನ ಕ್ರಮದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದರು.
ತಾಲೂಕು ಆಡಳಿತ, ಪೊಲೀಸ್ ಇಲಾಖೆ ಯಾರಿಗೂ ಹೆದರುವ ಅಗತ್ಯವಿಲ್ಲ. ಪಕ್ಷ ಸದಾ ನಿಮಗೆ ಬೆಂಬಲ ನೀಡಲಿದೆ. ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಹತ್ಯೆಯಾದವರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಅಲ್ಲದೆ ದಲಿತ ಕುಟುಂಬಕ್ಕೆ ರಕ್ಷಣೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಒಂದು ವೇಳೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಪ್ರಮುಖರಾದ ಕೆ.ಆರ್ ಸತೀಶ್, ಕೆ. ಮಂಜಪ್ಪ, ರಾಮನಾಥಬರ್ಗೆ, ಎಂ. ಮಂಜುನಾಥ್, ಅವಿನಾಶ್, ಪಿ. ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಚಿತ್ರ: ಡಿ೨೮-ಬಿಡಿವಿಟಿ
No comments:
Post a Comment