ಭದ್ರಾವತಿ, ಮೇ. ೨೯: ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಒಂದೇ ದಿನ ೧೩ ಸೋಂಕು ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯ ಪಡೆ ವತಿಯಿಂದ ಎ.ಕೆ ಕಾಲೋನಿ ಬ್ಯಾಂಕ್ ರಸ್ತೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳು ಆತಂಕದಲ್ಲಿ ಬದುಕು ಸಾಗಿಸುವಂತಾಗಿದೆ. ಅಂಗಡಿ ಮುಂಗಟ್ಟುಗಳಿಂದ ನಿರ್ಬಂಧದ ಶಿಕ್ಷೆ ಎದುರುವಂತಾಗಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಕೆ ಕಾಲೋನಿಯಲ್ಲಿ ೬ ಮಂದಿಗೆ ಹಾಗು ಹಳ್ಳಿಕೆರೆ ವ್ಯಾಪ್ತಿಯಲ್ಲಿ ೭ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಎ.ಕೆ ಕಾಲೋನಿಯಲ್ಲಿ ಸೋಂಕು ಕಾಣಿಸಿಕೊಂಡಿರುವ ಬ್ಯಾಂಕ್ ರಸ್ತೆಯನ್ನು ಮಾತ್ರ ಬಂದ್ ಮಾಡಲಾಗಿದೆ. ಆದರೆ ಇಡೀ ಕಾಲೋನಿಯ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಸೋಂಕು ಕಾಣಿಸಿಕೊಳ್ಳದ ರಸ್ತೆಗಳಲ್ಲಿನ ನಿವಾಸಿಗಳಿಗೂ ಹಾಲು, ಔಷಧ ಸೇರಿದಂತೆ ಇನ್ನಿತರ ಅಂಗಡಿ ಮುಂಗಟ್ಟುಗಳಲ್ಲಿ ಪ್ರವೇಶಿಸದಂತೆ ನಿರ್ಬಂಧಿಸಲಾಗುತ್ತಿದೆ. ಜೊತೆಗೆ ಅಕ್ಕಪಕ್ಕದ ಕಾಲೋನಿಯವರು ಸಹ ಒಂದು ರೀತಿಯಲ್ಲಿ ನೋಡುತ್ತಿದ್ದಾರೆಂಬ ಅಸಮಾಧಾನ ಇಲ್ಲಿನ ನಿವಾಸಿಗಳು ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆಡಳಿತ, ಗ್ರಾಮ ಪಂಚಾಯಿತಿ ಕಾರ್ಯಪಡೆ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನು ಒಂದೇ ರೀತಿಯಲ್ಲಿ ಕಾಣುವಂತಹ ವಾತಾವರಣ ಕಲ್ಪಿಸಿಕೊಡಬೇಕಾಗಿದೆ.
No comments:
Post a Comment