ಭದ್ರಾವತಿ, ಮೇ. ೨೧: ತಾಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸದ್ಯಕ್ಕೆ ಇಳಿಮುಖವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಶುಕ್ರವಾರ ಒಟ್ಟು ೧೮೨ ಸೋಂಕು ಪತ್ತೆಯಾಗಿದ್ದು, ಒಂದೇ ದಿನ ೭ ಮಂದಿ ಬಲಿಯಾಗಿದ್ದಾರೆ.
ಒಟ್ಟು ೪೧೪ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೮೨ ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಪುನಃ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೇವಲ ೬೨ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ಒಟ್ಟು ೮೮ ಮಂದಿ ಮೃತಪಟ್ಟಿದ್ದಾರೆ. ಒಟ್ಟು ೪೮೭ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನಲ್ಲಿ ಒಟ್ಟು ೪೯ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
೨೨ರಂದು ಕೋವಿಡ್ ಸಂಬಂಧಿಗಳ ತಂಗುದಾಣ ಉದ್ಘಾಟನೆ :
ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿರುವ ಕಟ್ಟಡದಲ್ಲಿ ಕೋವಿಡ್ ಸಂಬಂಧಿಗಳ ಅನುಕೂಲಕ್ಕಾಗಿ ಬಿಜೆಪಿ ಪಕ್ಷದವತಿಯಿಂದ ತೆರೆಯಲಾಗಿರುವ ತಂಗುದಾಣದ ಉದ್ಘಾಟನೆ ಮೇ.೨೨ರಂದು ಬೆಳಿಗ್ಗೆ ೯ ಗಂಟೆಗೆ ನಡೆಯಲಿದೆ. ಸಂಸದ ಬಿ.ವೈ ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
No comments:
Post a Comment