ಭದ್ರಾವತಿಯಲ್ಲಿ ಗೋಡೆ ಬರಹದ ಮೂಲಕ ಕೊರೋನಾ ಕುರಿತು ಜಾಗೃತಿ ಮೂಡಿಸುವ ಅಭಿಯಾನಕ್ಕೆ ಶನಿವಾರ ನಗರಸಭೆ ಪೌರಾಯುಕ್ತ ಮನೋಹರ್ ಚಾಲನೆ ನೀಡಿದರು.
ಭದ್ರಾವತಿ, ಮೇ. ೧: ಕಾಗದನಗರದ ಗುರು ಬ್ರದರ್‍ಸ್ ಆರ್ಟ್ಸ್ ವತಿಯಿಂದ ನಗರಸಭೆ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಕಟ್ಟಡ ಕಾರ್ಮಿಕರ ಸಂಘ ಹಾಗು ತಾಲೂಕು ಕುಂಚ ಕಲಾವಿದರ ಸಂಘ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿರುವ ಕೊರೋನಾ ಮತ್ತು ಪರಿಸರ ಜಾಗೃತಿ ಅಭಿಯಾನಕ್ಕೆ ನಗರಸಭೆ ಪೌರಾಯುಕ್ತ ಮನೋಹರ್ ಶನಿವಾರ ಚಾಲನೆ ನೀಡಿದರು.
ಕಳೆದ ವರ್ಷ ಕೊರೋನಾ ಸೋಂಕು ಕಾಣಿಸಿಕೊಂಡ ಆರಂಭದಿಂದಲೂ ಸ್ವಯಂ ಪ್ರೇರಣೆಯಿಂದ ಸ್ವಂತ ಖರ್ಚಿನಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಲಿಮ್ಕಾ ದಾಖಲೆ ಕುಂಚ ಕಲಾವಿದ ಬಿ. ಗುರುರವರು ನಗರದ ಪ್ರಮುಖ ಸ್ಥಳಗಳ ವೃತ್ತಗಳಲ್ಲಿ, ಬಸ್ ತಂಗುದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗೋಡೆ ಬರವಣಿಗೆ ಮೂಲಕ ಹಾಗು ಪ್ರಮುಖ ರಸ್ತೆಗಳ ವೃತ್ತಗಳಲ್ಲಿ ಆಕರ್ಷಕ ಚಿತ್ತಾರಗಳ ಮೂಲಕ ಕೊರೋನಾ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿ ಸಹ ಜಾಗೃತಿ ಕಾರ್ಯದಲ್ಲಿ ತೊಡಗಿದ್ದು, ಕಾಗದನಗರದ ಬಯಲು ರಂಗಮಂಟಪದಲ್ಲಿ ಚಾಲನೆ ನೀಡಲಾಯಿತು.
ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಈ.ಓ ಮಂಜುನಾಥ್, ವಲಯ ಅರಣ್ಯಾಧಿಕಾರಿ ಕೆ.ಎಚ್. ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ಕಾಗದನಗರ ಪೊಲೀಸ್ ಠಾಣಾಧಿಕಾರಿ ಶಿಲ್ಪಾ ನಾಯನಗೇಲಿ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕ ಸುಂದರ್‌ಬಾಬು, ಕರಿಗೌಡ, ಕುಮಾರ್, ಪೀಟರ್, ಪ್ರಸನ್ನ, ಕೆ.ಜಿ ರವಿಕುಮಾರ್, ತಿಮ್ಮಪ್ಪ, ಕಮಲಕರ್, ನಾಗಣ್ಣ, ಸುಬ್ಬಣ್ಣ ಪೈಂಟರ್, ಲಕ್ಷ್ಮಣ್, ಸಿ.ಬಿ ನಂಜಪ್ಪ, ಜಿ. ರವಿಕುಮಾರ್, ಗಿರೀಶ್, ಸುರೇಶ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment