ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಗಾಂಧಿನಗರ ವ್ಯಾಪ್ತಿಯನ್ನು ಒಳಗೊಂಡಿರುವ ನಗರಸಭೆ ವಾರ್ಡ್ ನಂ.೧೬ರಲ್ಲಿ ಭಾನುವಾರ ಸ್ಯಾನಿಟೈಜರ್ ಸಿಂಪಡಿಸಲಾಯಿತು.
ಭದ್ರಾವತಿ, ಮೇ. ೨೩: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಗಾಂಧಿನಗರ ವ್ಯಾಪ್ತಿಯನ್ನು ಒಳಗೊಂಡಿರುವ ನಗರಸಭೆ ವಾರ್ಡ್ ನಂ.೧೬ರಲ್ಲಿ ಭಾನುವಾರ ಸ್ಯಾನಿಟೈಜರ್ ಸಿಂಪಡಿಸಲಾಯಿತು.
ನಗರ ಪ್ರದೇಶದ ವ್ಯಾಪ್ತಿಯಲ್ಲಿರುವ ಪ್ರಮುಖ ವಾರ್ಡ್‌ಗಳ ಪೈಕಿ ೧೬ನೇ ವಾರ್ಡ್ ಸಹ ಒಂದಾಗಿದ್ದು, ನಗರಸಭೆ ಸಹಕಾರದೊಂದಿಗೆ ಅಗ್ನಿಶಾಮಕ ಇಲಾಖೆವತಿಯಿಂದ ವಾರ್ಡ್‌ನ ಪ್ರತಿಯೊಂದು ರಸ್ತೆಗೂ ಸ್ಯಾನಿಟೈಜರ್ ಸಿಂಪಡಿಸಲಾಯಿತು.
ವಾರ್ಡ್ ನೂತನ ಸದಸ್ಯ, ಹಿರಿಯ ಬಿಜೆಪಿ ಮುಖಂಡ ವಿ. ಕದಿರೇಶ್, ಅಗ್ನಿಶಾಮಕ ಠಾಣಾಧಿಕಾರಿ ವಸಂತಕುಮಾರ್ ಹಾಗು ಸಿಬ್ಬಂದಿಗಳು ಮತ್ತು ವಾರ್ಡ್ ಪ್ರಮುಖರು ಉಪಸ್ಥಿತರಿದ್ದರು.
No comments:
Post a Comment