ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ
ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕೊರೋನಾ ನಿಯಂತ್ರಣ ನಿರ್ವಹಣಾ ಸಭೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಮೇ. ೧: ಕಳೆದ ಬಾರಿಗಿಂತ ಈ ಬಾರಿ ಕೊರೋನಾ ಸೋಂಕಿನ ೨ನೇ ಅಲೆ ತೀವ್ರತೆ ಹೆಚ್ಚಾಗಿದ್ದು, ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿರುವ ನಿಯಮಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಮನವಿ ಮಾಡಿದರು.
ಅವರು ಶನಿವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಮಟ್ಟದ ಕೊರೋನಾ ನಿಯಂತ್ರಣ ನಿರ್ವಹಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜನತೆ ಕಟ್ಟುನಿಟ್ಟಾಗಿ ಪಾಲಿಸಬೇಕು
ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿದ್ದು, ಸೋಂಕಿನ ನಿಯಂತ್ರಣಕ್ಕೆ ಲಸಿಕೆ ಹಾಕಲಾಗುತ್ತಿದೆ. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಯಾವುದೇ ಆತಂಕವಿಲ್ಲದೆ ಹಾಕಿಸಿಕೊಳ್ಳಬೇಕು. ಕೊರೋನಾ ಸೋಂಕಿನ ೨ನೇ ಅಲೆ ಪರಿಣಾಮಕಾರಿಯಾಗಿದ್ದು, ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರಸ್ತುತ ಪ್ರತಿಯೊಬ್ಬರ ಪ್ರಾಣ ರಕ್ಷಣೆ ಮುಖ್ಯವಾಗಿದ್ದು, ತಮ್ಮನ್ನು ತಾವು ಕೊರೋನಾದಿಂದ ರಕ್ಷಿಸಿಕೊಳ್ಳುವುದರ ಜೊತೆಗೆ ಸಮಾಜದ ಸ್ವಾಥ್ಯ ಕಾಪಾಡಬೇಕೆಂದರು.
ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ ಅಶೋಕ್‌ನಾಯ್ಕ್, ಶಾಸಕ ಬಿ.ಕೆ. ಸಂಗಮೇಶ್ವರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment