ಭದ್ರಾವತಿ, ಮೇ. ೨೯: ತಾಲೂಕಿನಲ್ಲಿ ಕೊರೋನಾ ಸೋಂಕು ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಶನಿವಾರ ಒಟ್ಟು 154 ಸೋಂಕು ಪತ್ತೆಯಾಗಿದ್ದು, 5 ಜನ ಬಲಿಯಾಗಿದ್ದಾರೆ.
ಒಟ್ಟು 363 ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಪೈಕಿ 154 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೇವಲ ೩೮ ಮಂದಿ ಮಾತ್ರ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ತಾಲೂಕಿನಲ್ಲಿ ಒಟ್ಟು 4735 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4131 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 604 ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನ ೫ ಮಂದಿ ಬಲಿಯಾಗಿದ್ದಾರೆ. ಇದುವರೆಗೂ ಒಟ್ಟು 122 ಮಂದಿ ಮೃತಪಟ್ಟಿದ್ದು, 373 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಟ್ಟು 46 ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ 45 ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಉಳಿದಂತೆ ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟು 19 ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ 15 ಜೋನ್‌ಗಳನ್ನು ತೆರವುಗೊಳಿಸಲಾಗಿದೆ.
No comments:
Post a Comment