ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಂಗಳವಾರ ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲಾಯಿತು.
ಭದ್ರಾವತಿ, ಮೇ. ೧೮: ರಾಜ್ಯ ಸರ್ಕಾರ ಪತ್ರಕರ್ತರನ್ನು ಕೋವಿಡ್ ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಿದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆದ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ಮಂಗಳವಾರ ನೀಡಲಾಯಿತು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ನೇತೃತ್ವದಲ್ಲಿ ಹಳೇನಗರದ ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಸಿಕಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಗಣೇಶ್‌ರಾವ್ ಸಿಂಧ್ಯಾ ಅವರಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಹಿರಿಯ ಪತ್ರಕರ್ತ ಕಣ್ಣಪ್ಪ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗು ಆರೋಗ್ಯ ಇಲಾಖೆ ಲಸಿಕಾ ತಂಡದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment