ಭದ್ರಾವತಿ : ಕೊರೋನಾ ಸೋಂಕು 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಜಿಲ್ಲಾಡಾಳಿತ ಸಚಿವರ ನೇತೃತ್ವದಲ್ಲಿ ಗುರುವಾರ ನಗರದ ವಿಐಎಸ್ ಎಲ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸಚಿವರಾದ ಜಗದೀಶ್ ಶೆಟ್ಟರ್, ಕೆ ಎಸ್ ಈಶ್ವರಪ್ಪ ವಿಐಎಸ್ಎಲ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಎಸ್ ಪಿಎಲ್ ಗ್ಯಾಸ್ ಉತ್ಪಾದನಾ ಕಂಪೆನಿಯೊಂದಿಗೆ ಮಾತುಕತೆ ನಡೆಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಾಸಕ ಬಿ.ಕೆ ಸಂಗಮೇಶ್ವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಎಲ್ ವೈಶಾಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment