ಭದ್ರಾವತಿ, ಮೇ. ೧೧: ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-೧೯ ಸೋಂಕಿತರ ಚಿಕಿತ್ಸೆಗಾಗಿ ಮಾತ್ರ ಮೀಸಲಿಡಲಾಗಿದ್ದು, ಈ ಹಿನ್ನಲೆಯಲ್ಲಿ ಮೇ.೧೨ರಿಂದ ತುರ್ತು ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ.
ಅಪಘಾತ, ವಿಷಪ್ರಾಶನ, ಹಾವು ಕಡಿತ, ನಾಯಿ ಕಡಿತ ಮತ್ತು ಶವ ಪರೀಕ್ಷೆ ಸೇರಿದಂತೆ ತುರ್ತು ಸೇವೆಗಳಿಗೆ ಮಾತ್ರ ಸಾರ್ವಜನಿಕರು ಆಸ್ಪತ್ರೆಗೆ ತೆರಳಬಹುದಾಗಿದೆ. ಉಳಿದಂತೆ ಸಾಮಾನ್ಯ ಚಿಕಿತ್ಸೆಗಳಿಗೆ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
No comments:
Post a Comment