ಭದ್ರಾವತಿ, ಮೇ. ೧೮: ತಾಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಪುನಃ ೧೦೦ರ ಗಡಿ ದಾಟಿದೆ. ಮಂಗಳವಾರ ೧೬೧ ಸೋಂಕು ಪತ್ತೆಯಾಗಿದೆ.
ಒಟ್ಟು ೩೮೪ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೬೧ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು ೫೦ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ೬ ಮಂದಿ ಬಲಿಯಾಗಿದ್ದು, ಇದುವರೆಗೂ ಒಟ್ಟು ೭೭ ಮಂದಿ ಸಾವನ್ನಪ್ಪಿದ್ದಾರೆ. ೨೦೪ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಸೆಮಿ ಲಾಕ್‌ಡೌನ್ ನಡುವೆಯೂ ಸೋಂಕಿನ ಪ್ರಮಾಣ ಇಳಿಕೆಯಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ.
No comments:
Post a Comment