ಭದ್ರಾವತಿ, ಮೇ. ೨೦: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೇ.೨೨ ಮತ್ತು ೨೩ರಂದು ಎರಡು ದಿನ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಆದೇಶ ಹೊರಡಿಸಿದ್ದಾರೆ.
ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮೇ.೧೯ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಪೂರ್ಣ ಲಾಕ್‌ಡೌನ್ ಈ ಹಿನ್ನಲೆಯಲ್ಲಿ ಹಾಲು ಮತ್ತು ಔಷಧ ಅಂಗಡಿಗಳು ಹೊರತುಪಡಿಸಿ ಯಾವುದೇ ಅಂಗಡಿಮುಂಗಟ್ಟುಗಳು ತೆರೆಯುವಂತಿಲ್ಲ. ಅಲ್ಲದೆ ಅನಾವಶ್ಯಕವಾಗಿ ಜನ ಸಂಚಾರ ಸಹ ನಿಷೇಧಿಸಲಾಗಿದೆ. ಸಾರ್ವಜನಿಕರು ಮನೆಯಲ್ಲೇ ಇದ್ದು ಸಂಪೂರ್ಣ ಲಾಕ್‌ಡೌನ್‌ಗೆ ಸಹಕರಿಸುವಂತೆ ಕೋರಲಾಗಿದೆ.
No comments:
Post a Comment