ಭದ್ರಾವತಿ, ಮೇ. ೨೬: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಬುಧವಾರ ಒಟ್ಟು ೧೩೫ ಸೋಂಕು ಪತ್ತೆಯಾಗಿದ್ದು, ೩ ಮಂದಿ ಬಲಿಯಾಗಿದ್ದಾರೆ.
ಒಟ್ಟು ೩೫೦ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೩೫ ಮಂದಿಗೆ ಸೋಂಕು ದೃಢಪಟ್ಟಿದೆ. ಕೇವಲ ೩೫ ಮಂದಿ ಮಾತ್ರ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದು, ಇದುವರೆಗೂ ೧೦೪ ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಒಟ್ಟು ೪೩೭ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ೫೬ ಕಂಟೈನ್‌ಮೆಂಟ್ ಜೋನ್‌ಗಳ ಪೈಕಿ ೨೬ ತೆರವುಗೊಳಿಸಲಾಗಿದೆ. ಗ್ರಾಮೀಣ ಭಾಗದ ೨೭ ಕಂಟೈನ್‌ಮೆಂಟ್ ಜೋನ್‌ಗಳ ಪೈಕಿ ೨ ತೆರವುಗೊಳಿಸಲಾಗಿದೆ.
No comments:
Post a Comment