ಭದ್ರಾವತಿ, ಮೇ. ೧೨: ರಾಜ್ಯ ಸರ್ಕಾರ ಸೆಮಿ ಲಾಕ್‌ಡೌನ್ ಜಾರಿಗೊಳಿಸಿ ೩ ದಿನ ಕಳೆದಿದ್ದು, ಈ ನಡುವೆ ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುವ ಲಕ್ಷಣಗಳು ಕಾಣುತ್ತಿಲ್ಲ. ಗುರುವಾರ ಒಂದೇ ದಿನ ೧೬೨ ಪ್ರಕರಣಗಳು ಪತ್ತೆಯಾಗಿವೆ.
ಒಟ್ಟು ೨೭೫ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೬೨ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು ೬೬ ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ೪ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿಗೆ ಒಳಗಾಗಿರುವ ೩೪೬ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಲ್ಲಿ ಒಟ್ಟು ೨೫ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ ೨ ಜೋನ್ ತೆರವುಗೊಳಿಸಲಾಗಿದೆ.
No comments:
Post a Comment