ಭದ್ರಾವತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸೋಮವಾರ ನಿವೃತ್ತಿ ಹೊಂದಿದ ಎನ್. ಕೃಷ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಮೇ. ೨೧: ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸೋಮವಾರ ನಿವೃತ್ತಿ ಹೊಂದಿದ ಎನ್. ಕೃಷ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಎನ್. ಕೃಷ್ಣಪ್ಪ ಸತತವಾಗಿ ೪ ಬಾರಿ ಸಂಘದ ತಾಲೂಕು ಶಾಖೆ ಅಧ್ಯಕ್ಷರಾಗಿ ಹಾಗು ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ತಮ್ಮ ಅವಧಿಯಲ್ಲಿ ಸಂಘವನ್ನು ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಹೆಚ್ಚಿನ ಶ್ರಮವಹಿಸಿದ್ದಾರೆ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ವ್ಯವಸ್ಥಾಪಕರಾಗಿ, ಪ್ರಭಾರ ಸಹಾಯಕ ನಿರ್ದೇಶಕರಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಇದೆ ಸಂದರ್ಭದಲ್ಲಿ ಪ್ರಭಾರಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕರಾದ ಬಿ. ಸಿದ್ದಬಸಪ್ಪ ಅವರನ್ನು ಸಹ ಸನ್ಮಾನಿಸಿ ಅಭಿನಂದಿಸಲಾಯಿತು.
ಪ್ರಮುಖರಾದ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಎಂ.ಎಸ್ ಬಸರಾಜ್, ಎಸ್.ಕೆ ಮೋಹನ್, ಸಿ. ಜಯಪ್ಪ, ಉಪನ್ಯಾಸಕ ಡಾ. ಧನಂಜಯ, ರಾಜ್‌ಕುಮಾರ್, ಶ್ರೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment