ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಆಕ್ರೋಶ
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಖಂಡಿಸಿ ಶನಿವಾರ ಭದ್ರಾವತಿ ಬ್ಲಾಕ್ ಕಾಂಗ್ರೆಸ್ ನಗರ ಹಾಗು ಗ್ರಾಮಾಂತರ ಘಟಕಗಳ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜೂ. ೧೨: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಖಂಡಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ನಗರ ಹಾಗು ಗ್ರಾಮಾಂತರ ಘಟಕಗಳ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ವಿವಿಧೆಡೆ ಪೆಟ್ರೋಲ್ ಬಂಕ್‌ಗಳ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ಬರಬೇಕಾದ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು ಆರೋಪಿಸಿದರು.
ತಕ್ಷಣ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಕೋವಿಡ್ ಸಂಕಷ್ಟದಲ್ಲಿರುವ ಬಡ ಜನರಿಗೆ ಅಗತ್ಯ ದಿನಸಿ ಸಾಮಗ್ರಿಗಳನ್ನು ವಿತರಿಸಬೇಕು. ಕಾರ್ಮಿಕ ಹಾಗು ರೈತ ವಿರೋಧಿ ಧೋರಣೆಗಳನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿದರು.
ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಜಾರ್ಜ್, ಲತಾ ಚಂದ್ರಶೇಖರ್, ಚನ್ನಪ್ಪ, ಬಿ.ಟಿ ನಾಗರಾಜ್, ಕಾಂತರಾಜ್, ಮೊಹಮದ್, ಮುಖಂಡರಾದ ವೆಂಕಟೇಶ್ ಸುಬ್ಬಣ್ಣ, ಗಂಗಾಧರ್, ರಾಘವೇಂದ್ರ ಸರಾಟೆ, ಎಂ. ಶಿವಕುಮಾರ್, ಎಸ್.ಎಸ್ ಭೈರಪ್ಪ, ಆಂಜನಪ್ಪ, ದೇವೇಂದ್ರ ಗಿರಿ, ಲಕ್ಷ್ಮೀದೇವಿ, ಸುಮಿತ್ರ ಅಂಬೋರೆ, ಯುವ ಘಟಕದ ಭರತ್, ಶಂಕರ್, ವರುಣ್, ಉದಯ್, ಸುನಿಲ್ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.
No comments:
Post a Comment