೨ ಕೆ.ಜಿ ೧೦೦ ಗ್ರಾಂ. ತೂಕದ ಗಾಂಜಾ ವಶ
ಸೈಯ್ಯದ್ ಅರ್ಬಾಜ್ ಅಲಿಯಾಸ್ ಮಂಡ್ಯಾ
ಭದ್ರಾವತಿ, ಜೂ. ೫: ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಯುವಕರನ್ನು ಬಂಧಿಸುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೊಳೆಹೊನ್ನೂರು ರಸ್ತೆಯ ಸ್ಮಶಾನದ ಬಳಿ ಶುಕ್ರವಾರ ಸಂಜೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಗರದ ಮೊಮಿನ್ ಮೊಹಲ್ಲಾ ನಿವಾಸಿ ಸೈಯ್ಯದ್ ಅರ್ಬಾಜ್ ಅಲಿಯಾಸ್ ಮಂಡ್ಯಾ(೨೩) ಹಾಗು ನೆಹರು ನಗರ ನಿವಾಸಿ ಪರ್ವೀಜ್ ಅಲಿಯಾಸ್ ಮಾಯಾ(೨೨) ಈ ಇಬ್ಬರನ್ನು ಬಂಧಿಸಿ ೨ ಕೆ.ಜಿ ೧೦೦ ಗ್ರಾಂ ತೂಕದ ಗಾಂಜಾ, ೧,೬೦೦ ರು. ನಗದು ಮತ್ತು ೧ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಹಳೇನಗರದ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪರ್ವೀಜ್ ಅಲಿಯಾಸ್ ಮಾಯಾ
ಅನ್ವರ್ ಕಾಲೋನಿ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಸೇವನೆ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ ಎಂಬ ದೂರುಗಳು ಕೇಳಿ ಬರುತ್ತಿದ್ದವು. ಈ ನಡುವೆ ಗುರುವಾರ ಬಳ್ಳಾರಿ ಜಿಲ್ಲಾ ಪೊಲೀಸರು ಅಕ್ರಮ ಗಾಂಜಾ ಸಾಗಾಟದಲ್ಲಿ ತೊಡಗಿದ್ದ ಅನ್ವರ್ ಕಾಲೋನಿಯ ೩ ಯುವಕರನ್ನು ಬಂಧಿಸಿದ್ದರು. ಇದೀಗ ನಗರದಲ್ಲಿ ಇಬ್ಬರು ಸಿಕ್ಕಿಬಿದ್ದಿದ್ದಾರೆ.
No comments:
Post a Comment