ಭದ್ರಾವತಿ, ಜೂ. ೩: ತಾಲೂಕಿನಲ್ಲಿ ಕೊರೋನಾ ಸೋಂಕು ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಈ ನಡುವೆ ಜೂ.೭ರ ವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
ರಾಜ್ಯ ಸರ್ಕಾರ ಲಾಕ್‌ಡೌನ್ ಜಾರಿಗೊಳಿಸಿದಾಗಿನಿಂದಲೂ ಸೋಂಕಿನ ಪ್ರಮಾಣ ೧೦೦ ರಿಂದ ೨೫೦ ಗಡಿಯಾಚೆಯಲ್ಲಿದ್ದು, ಇದುವರೆಗೂ ತಾಲೂಕಿನಲ್ಲಿ ಸೋಂಕಿಗೆ ೧೩೪ ಮಂದಿ ಬಲಿಯಾಗಿದ್ದಾರೆ. ವಾರದಲ್ಲಿ ೨ ದಿನ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಜೂ.೭ರ ವರೆಗೂ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.
ಹಾಲು ಹಾಗು ಔಷಧಿ ಅಂಗಡಿಗಳು ಹೊರತುಪಡಿಸಿ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ. ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಬರದೆ ಸಂಪೂರ್ಣ ಲಾಕ್‌ಡೌನ್ ಯಶಸ್ವಿಗೊಳಿಸುವ ಜೊತೆಗೆ ಕೊರೋನಾ ನಿರ್ಮೂಲನೆಗೆ ಸಹಕರಿಸುವಂತೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಕೋರಿದ್ದಾರೆ.
No comments:
Post a Comment