ಜೆಡಿಎಸ್ ಪಕ್ಷದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮನವಿ
ಭದ್ರಾವತಿ ನಗರಸಭೆ ಎಲ್ಲಾ ವಾರ್ಡ್‌ಗಳಿಗೂ ೨೦೨೧-೨೨ನೇ ಸಾಲಿನ ೧೫ನೇ ಹಣಕಾಸು ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಜಾತ್ಯಾತೀತ ಜನತಾದಳ ವತಿಯಿಂದ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೧೪: ನಗರಸಭೆ ಎಲ್ಲಾ ವಾರ್ಡ್‌ಗಳಿಗೂ ೨೦೨೧-೨೨ನೇ ಸಾಲಿನ ೧೫ನೇ ಹಣಕಾಸು ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಜಾತ್ಯಾತೀತ ಜನತಾದಳ ವತಿಯಿಂದ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರಸಭೆ ೩೫ ವಾರ್ಡ್‌ಗಳ ಪೈಕಿ ೩೪ ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು, ಕೊರೋನಾ ಸೋಂಕು ನಿಯಂತ್ರಣಕ್ಕೆ ನಗರಸಭೆ ಅಧಿಕಾರಿಗಳೊಂದಿಗೆ ನೂತನ ಸದಸ್ಯರು ಸಹ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಸಹ ವಿಳಂಬವಾಗಿರುತ್ತದೆ. ಈ ನಡುವೆ ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ತರುವ ಮೂಲಕ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರ ವಾರ್ಡ್‌ಗಳಿಗೆ ಮಾತ್ರ ಅನುದಾನ ಬಿಡುಗಡೆಗೊಳಿಸುವಂತೆ ೧೫ನೇ ಹಣಕಾಸು ಯೋಜನೆಯಡಿ ಸುಮಾರು ೭೫೦ ಲಕ್ಷ ರು. ಕ್ರಿಯಾ ಯೋಜನೆ ರೂಪಿಸುವ ಮೂಲಕ ಅನುಮೋದನೆಗೆ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗಿದೆ. ಶಾಸಕರ ಮಲತಾಯಿ ಧೋರಣೆಯನ್ನು ಖಂಡಿಸುವ ಜೊತೆಗೆ ತಕ್ಷಣ ಈ ಕ್ರಿಯಾ ಯೋಜನೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಲಾಗಿದೆ.
ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಸರಿಯಲ್ಲ ತಕ್ಷಣ ನಗರಸಭೆ ಎಲ್ಲಾ ೩೫ ವಾರ್ಡ್‌ಗಳಿಗೂ ಸಮಾನವಾಗಿ ಅನುದಾನ ಬಿಡುಗಡೆಗೊಳಿಸುವ ಜೊತೆಗೆ ನ್ಯಾಯ ಒದಗಿಸಿಕೊಡುವಂತೆ ಕೋರಲಾಗಿದೆ.
ಪಕ್ಷದ ಮುಖಂಡರಾದ ಶಾರದಾ ಅಪ್ಪಾಜಿ ಹಾಗು ಪಕ್ಷದ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ನಗರಸಭಾ ಸದಸ್ಯರಾದ ಬಸವರಾಜ ಬಿ. ಆನೇಕೊಪ್ಪ, ರೇಖಾ .ಟಿ, ಮಂಜುಳಾ ಸುಬ್ಬಣ್ಣ, ಜಯಶೀಲ, ವಿಜಯ, ಪ್ರೇಮಾ, ಕೋಟೇಶ್ವರರಾವ್, ಉದಯ್‌ಕುಮಾರ್, ರೂಪಾವತಿ, ಪಲ್ಲವಿ, ಸವಿತಾ, ಆರ್. ಮೋಹನ್‌ಕುಮಾರ್, ಮುಖಂಡರಾದ ಗುಣಶೇಖರ್, ಸುರೇಶ್, ಪ್ರಕಾಶ್, ಉಮೇಶ್, ದಿಲೀಪ್, ವೆಂಕಟೇಶ್, ಅಶೋಕ್‌ಕುಮಾರ್ ಉಜ್ಜನಿಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment