ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಉದ್ಯೋಗ ನೀಡುವಂತೆ ಆಗ್ರಹಿಸಿ ಸೋಮವಾರ ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿ ಅಭಿವೃದ್ಧಿ ಅಧಿಕಾರಿ ಸಿ. ಕುಮಾರ್ ಅವರಿಗೆ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೧೪: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಉದ್ಯೋಗ ನೀಡುವಂತೆ ಆಗ್ರಹಿಸಿ ಸೋಮವಾರ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿ ಅಭಿವೃದ್ಧಿ ಅಧಿಕಾರಿ ಸಿ. ಕುಮಾರ್ ಅವರಿಗೆ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ನಿವಾಸಿಗಳು ತೀರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸರಿಯಾಗಿ ಉದ್ಯೋಗ ನೀಡುತ್ತಿಲ್ಲ. ಜೂ.೯ ರಿಂದ ೧೨ರ ವರೆಗೆ ಕೇವಲ ೪ ದಿನ ಮಾತ್ರ ಉದ್ಯೋಗ ನೀಡಲಾಗಿದೆ. ಈ ಹಿಂದೆ ೭ ದಿನ ಕೆಲಸ ನೀಡಿರುವುದಿಲ್ಲ. ಇದರಿಂದಾಗಿ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಸಮರ್ಪಕವಾಗಿ ಉದ್ಯೋಗ ನೀಡುವಂತೆ ಆಗ್ರಹಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯರಾದ ಬಿ. ಆನಂದ್, ಶೋಭಾ ಬಾಯಿ, ತಾಂಡ ಅಭಿವೃದ್ಧಿ ನಿಗಮದ ತಾಲೂಕು ಸಂಪನ್ಮೂಲ ವ್ಯಕ್ತಿ ಹೇಮಂತ್, ಮುಖಂಡರಾದ ಧರ್ಮನಾಯಕ್, ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment