ಸೆಮಿ ಲಾಕ್‌ಡೌನ್ ಸಡಿಲಗೊಳಿಸಿದ ಹಿನ್ನಲೆಯಲ್ಲಿ ಸೋಮವಾರ ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ.
ಭದ್ರಾವತಿ, ಜೂ. ೨೧: ಸೆಮಿ ಲಾಕ್‌ಡೌನ್ ಸಡಿಲಗೊಳಿಸದ ಹಿನ್ನಲೆಯಲ್ಲಿ ಸೋಮವಾರ ನಗರದಲ್ಲಿ ಮಧ್ಯಾಹ್ನದವರೆಗೂ ಜನಸಂದಣಿ ಕಂಡು ಬಂದಿತು.
ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳ ಎಂದಿನಂತೆ ಸಂಚರಿಸಿದವು. ಲಾರಿ, ಆಟೋ, ಕಾರು ಸೇರಿದಂತೆ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿತ್ತು. ಬಹುತೇಕ ಎಲ್ಲಾ ಅಂಗಡಿಮುಂಗಟ್ಟುಗಳು ತೆರೆಯಲ್ಪಟ್ಟಿದ್ದವು. ಅದರಲ್ಲೂ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಜನಸಂದಣಿ ಅಧಿಕವಾಗಿತ್ತು. ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರ ಮರೆತು ಖರೀದಿಯಲ್ಲಿ ತೊಡಗಿರುವುದು ಕಂಡು ಬಂದಿತು.
ಲಾಕ್‌ಡೌನ್ ಆರಂಭಗೊಂಡಾಗಿನಿಂದಲೂ ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣವನ್ನು ಸೇವೆಗೆ ಮುಕ್ತಗೊಳಿಸಲಾಗಿತ್ತು. ದೂರದ ಊರುಗಳು ಹಾಗು ಶಿವಮೊಗ್ಗ-ಭದ್ರಾವತಿ ನಡುವೆ ಬಸ್‌ಗಳು ಸಂಚರಿಸಿದವು.
No comments:
Post a Comment