ಭದ್ರಾವತಿ, ಜೂ. ೬: ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ೨ನೇ ಅವಧಿಯ ಸೆಮಿ ಲಾಕ್‌ಡೌನ್ ಮುಕ್ತಾಯಗೊಳ್ಳಲು ಒಂದು ದಿನ ಬಾಕಿ ಇದೆ. ಆದರೂ ಸಹ ತಾಲೂಕಿನಲ್ಲಿ ಸೋಂಕಿನ ನೂರರ ಗಡಿಯಾಚೆಯಲ್ಲಿದ್ದು, ಭಾನುವಾರ ೧೩೯ ಸೋಂಕು ಪತ್ತೆಯಾಗಿದೆ.
ಒಟ್ಟು ೧೪೪ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೩೯ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೭೭ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ೨ ಇಬ್ಬರು ಬಲಿಯಾಗಿದ್ದಾರೆ.
ಇದುವರೆಗೂ ಒಟ್ಟು ೫೮೯೯ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೪೭೯೫ ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ೧೧೦೪ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿವೆ. ಇದುವರೆಗೂ ಒಟ್ಟು ೧೫೧ ಮಂದಿ ಮೃತಪಟ್ಟಿದ್ದು, ೪೫೪ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಟ್ಟು ೩೬ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ೮೪ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಇದೆ ರೀತಿ ಗ್ರಾಮಾಂತರ ಭಾಗದಲ್ಲಿ ೨೬ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ೧೭ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.
No comments:
Post a Comment