ಭದ್ರಾವತಿ, ಜೂ. ೨೨: ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಬೊಮ್ಮನಕಟ್ಟೆ ಸರ್‌ಎಂವಿ ವಿಜ್ಞಾನ ಕಾಲೇಜು ಹಾಗು ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ರಮ ಜೂ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲರಾದ ಡಾ. ವಿಷ್ಣುಮೂರ್ತಿ, ಡಾ. ರವೀಂದ್ರ, ಪ್ರೊ. ವರದರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment