ಭದ್ರಾವತಿ, ಜೂ. ೯: ತಾಲೂಕಿನಲ್ಲಿ ಮಂಗಳವಾರ ಕೇವಲ ೪೫ ಕೊರೋನಾ ಸೋಂಕು ಪತ್ತೆಯಾಗಿತ್ತು. ಆದರೆ ಬುಧವಾರ ಸೋಂಕು ಪುನಃ ನೂರರ ಗಡಿ ದಾಟಿದ್ದು, ಒಟ್ಟು ೧೧೩ ಸೋಂಕು ದೃಢಪಟ್ಟಿದೆ. ಈ ನಡುವೆ ಸೋಂಕಿಗೆ ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
ಒಟ್ಟು ೧೦೫೪ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ೧೧೩ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ೮೨ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ತಾಲೂಕಿನಲ್ಲಿ ಇದುವರೆಗೂ ಒಟ್ಟು ೬೧೩೪ ಸೋಂಕು ಪ್ರಕರಣಗಳು ದಾಖಲಾಗಿದ್ದು, ೫೧೨೯ ಮಂದಿ ಗುಣಮುಖರಾಗಿದ್ದಾರೆ. ೧೦೦೫ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿವೆ.
ಒಂದೇ ದಿನ ೬ ಮಂದಿ ಬಲಿಯಾಗಿದ್ದು, ಇದುವರೆಗೂ ಒಟ್ಟು ೧೬೬ ಮಂದಿ ಮೃತಪಟ್ಟಿದ್ದಾರೆ. ಒಟ್ಟು ೨೬೩ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಟ್ಟು ೪೨ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯಾಗಿದ್ದು, ಇದುವರೆಗೂ ೮೪ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಒಟ್ಟು ೨೬ ಜೋನ್‌ಗಳು ಸಕ್ರಿಯಾಗಿದ್ದು, ೧೭ ತೆರವುಗೊಳಿಸಲಾಗಿದೆ.
No comments:
Post a Comment