ಭದ್ರಾವತಿ, ಜೂ. ೪: ತಾಲೂಕಿನಲ್ಲಿ ಶುಕ್ರವಾರ ಒಟ್ಟು ೧೧೭ ಕೊರೋನಾ ಸೋಂಕು ಪತ್ತೆಯಾಗಿದ್ದು, ಒಂದೇ ದಿನ ೪ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಒಟ್ಟು ೫೩೯ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೧೭ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೇವಲ ೯೦ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ತೆರಳಿದ್ದಾರೆ. ಇದುವರೆಗೂ ಒಟ್ಟು ೫೬೩೨ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಪೈಕಿ ೪೬೨೭ ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ೧೦೦೫ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿದ್ದು, ಇದುವರೆಗೂ ೧೩೮ ಮಂದಿ ಮೃತಪಟ್ಟಿದ್ದಾರೆ.
ಒಟ್ಟು ೪೮೬ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ಭಾಗದಲ್ಲಿ ಒಟ್ಟು ೫೨ ಕಂಟೈನ್‌ಮೆಂಟ್ ಜೋನ್‌ಗಳಿವೆ. ಈ ಪೈಕಿ ೩೯ ತೆರವುಗೊಳಿಸಲಾಗಿದೆ. ಉಳಿದಂತೆ ಗ್ರಾಮಾಂತರ ಭಾಗದಲ್ಲಿ ೨೯ ಕಂಟೈನ್‌ಮೆಂಟ್ ಜೋನಗಳಿದ್ದು, ಪೈಕಿ ೮ ಜೋನ್ ತೆರವುಗೊಳಿಸಲಾಗಿದೆ.
No comments:
Post a Comment