ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾದ ಭದ್ರಾವತಿ ಜೈ ಭೀಮಾ ನಗರದ ನಿವಾಸಿ, ನಗರಸಭೆ ಗುತ್ತಿಗೆ ಪೌರ ನೌಕರ ಸುನಿಲ್ ಮನೆಗೆ ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಬುಧವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಭದ್ರಾವತಿ, ಜೂ. ೧೬: ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾದ ಜೈ ಭೀಮಾ ನಗರದ ನಿವಾಸಿ, ನಗರಸಭೆ ಗುತ್ತಿಗೆ ಪೌರ ನೌಕರ ಸುನಿಲ್ ಮನೆಗೆ ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಬುಧವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಸುನಿಲ್ ಹತ್ಯೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ ಸಂಸದರು. ಸುನಿಲ್ ಕುಟುಂಬಸ್ಥರ ನೆರವಿಗೆ ಮುಂದಾಗುವುದಾಗಿ ಭರವಸೆ ನೀಡುವ ಜೊತೆಗೆ ವೈಯಕ್ತಿಕವಾಗಿ ೩೦ ಸಾವಿರ ರು. ನಗದು ನೀಡಿ ಸಾಂತ್ವಾನ ಹೇಳಿದರು.
ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಮಾಡಿದರು. ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಮುಖಂಡರಾದ ಸತ್ಯ ಭದ್ರಾವತಿ, ಚಿನ್ನಯ್ಯ, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ಪಿ. ಗಣೇಶ್‌ರಾವ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment