ಭದ್ರಾವತಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಹಾಗು ಅಡುಗೆ ಅನಿಲ ವಿತರಣಾ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಹಾಕಲಾಯಿತು.
ಭದ್ರಾವತಿ, ಜೂ. ೧: ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಹಾಗು ಅಡುಗೆ ಅನಿಲ ವಿತರಣಾ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಹಾಕಲಾಯಿತು.
ಇಲಾಖೆಯ ಶಿವಮೊಗ್ಗ ಜಂಟಿ ನಿರ್ದೇಶಕರು, ನೋಡಲ್ ಅಧಿಕಾರಿಯಾದ ಮಂಜುನಾಥ್ ಅವರ ಸಹಕಾರದೊಂದಿಗೆ ನಡೆದ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು ೧೮೦ ಮಂದಿಗೆ ಲಸಿಕೆ ಹಾಕಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರ ಆಹಾರ ನಿರೀಕ್ಷಕ ಎ.ಟಿ ಬಸವರಾಜ್, ಶಿವಶಂಕರಯ್ಯ ಪೆಟ್ರೋಲ್ ಬಂಕ್ ಮಾಲೀಕ ಶಾಂತು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment