ಕೆ. ನಿಂಗಪ್ಪ
ಭದ್ರಾವತಿ, ಜೂ. ೭: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಬಿ.ಇಡಿ ವಿಭಾಗದ ಪ್ರಾಂಶುಪಾಲ ಕೆ. ನಿಂಗಪ್ಪ ಸೋಮವಾರ ಬೆಳಿಗ್ಗೆ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಪತ್ನಿಯನ್ನು ಹೊಂದಿದ್ದರು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಂಗಪ್ಪ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಹಾಗು ಪ್ರಭಾರ ಆಡಳಿತಾಧಿಕಾರಿಯಾಗಿ ಸುಮಾರು ೧೬ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಭಾರ ನೂತನ ಅಧ್ಯಕ್ಷ ಬಿ. ಸಿದ್ದಬಸಪ್ಪ, ಮಾಜಿ ಅಧ್ಯಕ್ಷ ಎನ್. ಕೃಷ್ಣಪ್ಪ, ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.
No comments:
Post a Comment