ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಜನಾಂಗ ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಚಿತ್ರ ನಟ ಚೇತನ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ತಾಲೂಕು ಬ್ರಾಹ್ಮಣ ಸಭಾ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೧೬: ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಜನಾಂಗ ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಚಿತ್ರ ನಟ ಚೇತನ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ತಾಲೂಕು ಬ್ರಾಹ್ಮಣ ಸಭಾ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಚಿತ್ರನಟ ಚೇತನ್ ಯುಟೂಬ್, ಫೇಸ್‌ಬುಕ್ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ್ಯದ ಬಗ್ಗೆ, ಬ್ರಾಹ್ಮಣ ಜನಾಂಗ ಹಾಗು ಪುರೋಹಿತರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಜೊತೆಗೆ ಬ್ರಾಹ್ಮಣ ಜನಾಂಗ ಸರ್ವನಾಶ ಮಾಡಬೇಕೆಂದು ಹೇಳಿದ್ದು, ಎಲ್ಲರೊಂದಿಗೆ ಸಹಬಾಳ್ವೆ ನಡೆಸುತ್ತಿರುವ ಬ್ರಾಹ್ಮಣರನ್ನು ಈ ರೀತಿ ತುಚ್ಛವಾಗಿ ಅವಹೇಳನ ಮಾಡಿರುವುದು ಖಂಡನೀಯ.
ಬ್ರಾಹ್ಮಣ ಜನಾಂಗದ ಕುರಿತು ಅವಹೇಳನ ಮಾಡುವವರಿಗೆ ಬಹಿರಂಗ ಬೆಂಬಲ ನೀಡುವುದು ಸಹ ಇತ್ತೀಚಿನ ವರ್ಷಗಳಲ್ಲಿ ಒಂದು ರೀತಿಯ ಸಾಂಕ್ರಾಮಿಕ ರೋಗವಾಗಿ ಪರಿಣಮಿಸಿದೆ. ರಾಜ್ಯ ಸರ್ಕಾರ ತಕ್ಷಣ ನಟ ಚೇತನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಕೈಗೊಳ್ಳುವ ಕ್ರಮ ಮುಂದಿನ ದಿನಗಳಲ್ಲಿ ಬ್ರಾಹ್ಮಣ ಜನಾಂಗವನ್ನು ನಿಂದಿಸುವವರಿಗೆ ಒಂದು ಎಚ್ಚರಿಕೆಯ ಪಾಠವಾಗಬೇಕೆಂದು ಆಗ್ರಹಿಸಲಾಯಿತು.
ಬ್ರಾಹ್ಮಣ ಸಭಾ ತಾಲೂಕು ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಉಪಾಧ್ಯಕ್ಷರಾದ ಜಿ. ರಮಾಕಾಂತ್, ಡಿ. ಸತ್ಯನಾರಾಯಣರಾವ್, ಪ್ರಧಾನ ಕಾರ್ಯದರ್ಶಿ ಜಿ. ರಮೇಶ್, ಖಜಾಂಚಿ ಕೆ. ಮಂಜುನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment