ಭದ್ರಾವತಿ, ಜೂ. ೧: ಕೊರೋನಾ ಸೋಂಕು ತಾಲೂಕಿನಲ್ಲಿ ಪುನಃ ನೂರರ ಗಡಿ ದಾಟಿದ್ದು, ಮಂಗಳವಾರ ೧೧೫ ಸೋಂಕು ಪತ್ತೆಯಾಗಿದೆ.
ಒಟ್ಟು ೬೦೫ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೦೫ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೇವಲ ೪೭ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು ಇದುವರೆಗೂ ೪೯೫೩ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೪೨೫೬ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೩೭೮ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ೮೪ ಹಾಗು ಗ್ರಾಮಾಂತರ ವ್ಯಾಪ್ತಿಯಲ್ಲಿ ೨೮ ಕಂಟೈನ್‌ಮೆಂಟ್ ಜೋನ್‌ಗಳಿವೆ.
No comments:
Post a Comment