ಭದ್ರಾವತಿ, ಜೂ. ೧೮: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಆದರೆ ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಶುಕ್ರವಾರ ಒಂದೇ ದಿನ ೬ ಮಂದಿ ಮೃತಪಟ್ಟಿದ್ದಾರೆ.
ಒಟ್ಟು ೧೦೫೫ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೫೨ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೧೮ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ಒಟ್ಟು ೬೭೪೧ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೬೫೭೧ ಮಂದಿ ಗುಣಮುಖರಾಗಿದ್ದಾರೆ. ೧೭೦ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿದ್ದು, ಇದುವರೆಗೂ ಒಟ್ಟು ೧೮೯ ಮೃತಪಟ್ಟಿದ್ದಾರೆ.
ಒಟ್ಟು ೧೫೮ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ಒಟ್ಟು ೩೬ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿವೆ. ಇದುವರೆಗೂ ೧೦೩ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮೀಣ ವ್ಯಾಪ್ತಿಯಲ್ಲಿ ೨೭ ಜೋನ್‌ಗಳು ಸಕ್ರಿಯವಾಗಿವೆ.
No comments:
Post a Comment