ಸಂಸದ ಎ. ನಾರಾಯಣಸ್ವಾಮಿ
ಭದ್ರಾವತಿ, ಜೂ. ೧೬: ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಹಾವಳಿ ಮಿತಿಮೀರಿದ್ದು, ಇದರಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಎ. ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಗಾಂಜಾ ಅಮಲಿನಲ್ಲಿ ಯುವಕರು ನಡೆಸಿರುವ ಹಲ್ಲೆ ಪರಿಣಾಮ ನಗರಸಭೆ ಗುತ್ತಿಗೆ ಪೌರ ನೌಕರ ಸುನಿಲ್ ಬಲಿಯಾಗಿದ್ದಾನೆ ಎಂಬ ವಿಚಾರ ತಿಳಿದು ಆತಂಕ ಉಂಟಾಗಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಗಾಂಜಾ ಹಾವಳಿ ಹೆಚ್ಚಾಗಿರುವುದು ವಿಷಾದನೀಯ ಸಂಗತಿಯಾಗಿದೆ. ಗಾಂಜಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ರಕ್ಷಣಾ ಇಲಾಖೆ ಕಠಿಣ ಕ್ರಮ ಅನುಸರಿಸಬೇಕು. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದರು.
ಹತ್ಯೆಯಾದ ಗುತ್ತಿಗೆ ಪೌರ ನೌಕರ ಸುನಿಲ್ ಕುಟುಂಬಕ್ಕೆ ಕೊರೊನಾ ವಾರಿಯರ್ಸ್‌ಗಳಿಗೆ ನೀಡುವಂತೆ ಸರ್ಕಾರ ೩೦ ಲಕ್ಷ ರು. ಪರಿಹಾರ ನೀಡಬೇಕು.ನಗರಸಭೆ ವತಿಯಿಂದ ಮೃತನ ಕುಟುಂಬಕ್ಕೆ ನಿವೇಶನ ಹಾಗೂ ಉದ್ಯೋಗ, ಜಿಲ್ಲಾಡಳಿತದಿಂದ ೨ ಎಕರೆ ಜಮೀನು ನೀಡುವಂತೆ ಸಂಸದರು ಒತ್ತಾಯಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ಪಿ. ಗಣೇಶ್‌ರಾವ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment