ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ತಾಲೂಕಿನ ಸರ್ಕಾರಿ ನೌಕರರಿಗಾಗಿ ಪ್ರತ್ಯೇಕವಾಗಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
ಭದ್ರಾವತಿ, ಜೂ. ೧೧: ಕೊರೋನಾ ನಿರ್ಮೂಲನೆಗಾಗಿ ಎಲ್ಲೆಡೆ ನಿರಂತರವಾದ ಹೋರಾಟಗಳು ನಡೆಯುತ್ತಿವೆ. ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈಗಾಗಲೇ ದೇಶದ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯವಾಗಬೇಕೆಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲೆಡೆ ಲಸಿಕೆ ಕಾರ್ಯ ಭರದಿಂದ ನಡೆಯುತ್ತಿದ್ದು, ಮುಂದಿನ ವಾರ ರಾಜ್ಯಕ್ಕೆ ೧ ಕೋಟಿ ಲಸಿಕೆ ಬರಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
ಅವರು ಶುಕ್ರವಾರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ತಾಲೂಕಿನ ಸರ್ಕಾರಿ ನೌಕರರಿಗಾಗಿ ಪ್ರತ್ಯೇಕವಾಗಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಇದೀಗ ೨ನೇ ಅಲೆ ಮುಕ್ತಾಯಗೊಳ್ಳುವ ಹಂತದಲ್ಲಿದ್ದು, ೩ನೇ ಅಲೆ ಕಾಣಿಸಿಕೊಳ್ಳುವ ಬಗ್ಗೆ ತಜ್ಞರು ಈಗಾಗಲೇ ಮುನ್ಸೂಚನೆ ನೀಡಿದ್ದಾರೆ. ಇದೀಗ ನಮ್ಮ ಮುಂದೆ ಹಲವು ಸವಾಲುಗಳಿವೆ. ಅವುಗಳನ್ನು ಸಮರ್ಥವಾಗಿ, ಪ್ರಾಮಾಣಿಕವಾಗಿ ಎದುರಿಸುವ ಪ್ರಯತ್ನ ಎಲ್ಲರೂ ಕೈಗೊಳ್ಳಬೇಕಾಗಿದೆ. ಸರ್ಕಾರಿ ನೌಕರರು ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರ ಸಂಘಟನೆ ಹೆಚ್ಚು ಪ್ರಬಲವಾಗಿದ್ದು, ಕ್ರಿಯಾಶೀಲ ಅಧ್ಯಕ್ಷರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ನಿರಂತರವಾದ ಚಟುವಟಿಕೆಗಳು ನಡೆಯುತ್ತಿವುದು ಶ್ಲಾಘನೀಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ತಾಲೂಕಿನ ಸರ್ಕಾರಿ ನೌಕರರಿಗಾಗಿ ಪ್ರತ್ಯೇಕವಾಗಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿದ ಸಂಸದ ಬಿ.ವೈ ರಾಘವೇಂದ್ರ ನಂತರ ಪರಿಶೀಲನೆ ನಡೆಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸೂಡಾ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ಸದಸ್ಯರಾದ ರಾಮಲಿಂಗಯ್ಯ, ವಿ. ಕದಿರೇಶ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕೂಬಾನಾಯ್ಕ, ಯು. ಮಹಾದೇವಪ್ಪ, ಧನಂಜಯ, ನಿಲೇಶ್‌ರಾಜ್, ರಾಜ್‌ಕುಮಾರ್, ಎಂ.ಎಸ್. ಬಸವರಾಜ್, ರಾಜಪ್ಪ, ರಂಗನಾಥಪ್ರಸಾದ್, ರೇವಣಪ್ಪ, ಸರ್ಕಾರಿ ನೌಕರರ ಸಂಘದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment