ಸಂಚಾರಿ ಪೊಲೀಸ್ ಠಾಣಾಧಿಕಾರಿ ಕೆ.ಬಿ ರಮೇಶ್
ಭದ್ರಾವತಿ, ಜೂ. ೪: ನಗರದ ಸಂಚಾರಿ ಪೊಲೀಸ್ ಠಾಣಾಧಿಕಾರಿ-೨ ಕೆ.ಬಿ ರಮೇಶ್(೫೯) ಶುಕ್ರವಾರ ಮಧ್ಯಾಹ್ನ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ ಹೊಂದಿದ್ದರು. ರಮೇಶ್ ಮೇ.೧೪ರಂದು ಅನಾರೋಗ್ಯಕ್ಕೆ ತುತ್ತಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಮೇಶ್ ಕರ್ತವ್ಯದಿಂದ ನಿವೃತ್ತಿ ಹೊಂದಲು ೧ ತಿಂಗಳು ಬಾಕಿ ಇತ್ತು. ಇವರ ನಿಧನಕ್ಕೆ ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ ಹಾಗು ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
No comments:
Post a Comment