ಭದ್ರಾವತಿ ವಾರ್ಡ್ ನಂ.೩೩ರ ವ್ಯಾಪ್ತಿಯ ಹುತ್ತಾಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಶ್ರೀ ಧನ್ವಂತರಿ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
ಭದ್ರಾವತಿ, ಜೂ. ೫: ಕೊರೋನಾ ೨ನೇ ಅಲೆ ನಡೆವೆಯೂ ಶನಿವಾರ ನಗರದ ವಿವಿಧೆಡೆ ಸಸಿ ನೆಡುವ ಮೂಲಕ ಸರಳವಾಗಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ವಾರ್ಡ್ ನಂ.೩೩ರ ವ್ಯಾಪ್ತಿಯ ಹುತ್ತಾಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಶ್ರೀ ಧನ್ವಂತರಿ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. ನಗರಸಭೆ ಪೌರಾಯುಕ್ತ ಕೆ. ಪರಮೇಶ್, ನೂತನ ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ಲತಾ ಚಂದ್ರಶೇಖರ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ಮುಖಂಡರಾದ ಎನ್. ರಾಮಕೃಷ್ಣ, ಕಬಡ್ಡಿ ಕೃಷ್ಣೇಗೌಡ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ವಾರ್ಡ್ ನಂ.೨೬ರ ನ್ಯೂಟೌನ್ ಬೆಣ್ಣೆಕೃಷ್ಣ ವೃತ್ತದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
ವಾರ್ಡ್ ನಂ.೨೬ರ ನ್ಯೂಟೌನ್ ಬೆಣ್ಣೆಕೃಷ್ಣ ವೃತ್ತದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. ನೂತನ ನಗರಸಭಾ ಸದಸ್ಯೆ ಸರ್ವಮಂಗಳ ಭೈರಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ಪ್ರಶಾಂತ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಬಸಂತ್‌ಕುಮಾರ್ ಪಾಟೀಲ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ನಗರಸಭೆ ಮಾಜಿ ಸದಸ್ಯರಾದ ಮುಕುಂದಪ್ಪ, ಪ್ರಾನ್ಸಿಸ್, ಪ್ರಮುಖರಾದ ವಿಲ್ಸನ್‌ಬಾಬು, ಎಂ.ಜಿ ರಾಮಚಂದ್ರನ್, ಪ್ರಸನ್ನಕುಮಾರ್, ಹರೀಶ್ ಕುಮಾರ್, ವಿನೋದ್‌ಕುಮಾರ್ ಮತ್ತು ಶಂಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ಅರಣ್ಯ ರಕ್ಷಕ ಎಚ್. ರಷೀದ್, ಉದ್ಯಮಿ ಎ. ಮಾಧು, ಉಪನ್ಯಾಸಕಿ ಸೃಷ್ಟಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು
No comments:
Post a Comment