ಭದ್ರಾವತಿ ಹಳೇನಗರದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ದಿನಾಚರಣೆ ಹಾಗು ಪತ್ರಿಕಾಭವನದ ಮುಂದುವರೆದ ಕಾಮಗಾರಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಬದರಿನಾರಾಯಣ ಶ್ರೇಷ್ಠಿ ದಂಪತಿಯನ್ನು ಸನ್ಮಾಸಿ ಗೌರವಿಸಲಾಯಿತು.
ಭದ್ರಾವತಿ, ಜು. ೧೧: ಪತ್ರಕರ್ತರು ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆ ಅಪಾರವಾಗಿದ್ದು, ಪತ್ರಕರ್ತರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಭಾನುವಾರ ಹಳೇನಗರದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ದಿನಾಚರಣೆ ಹಾಗು ಪತ್ರಿಕಾಭವನದ ಮುಂದುವರೆದ ಕಾಮಗಾರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಎಲ್ಲರಿಗೂ ಸಮಾಜದ ಪ್ರತಿಯೊಂದು ಮಾಹಿತಿಗಳು ತಲುಪಬೇಕಾದರೆ ಪತ್ರಕರ್ತರ ಅವಶ್ಯಕತೆ ಅನಿವಾರ್ಯವಾಗಿದೆ. ಸಮಾಜದಲ್ಲಿನ ಒಳಿತು, ಕೆಡಕು ಎಲ್ಲವನ್ನು ತಿಳಿಸಿಕೊಡುವ ಜೊತೆಗೆ ಪತ್ರಕರ್ತರು ಸಮಾಜದ ಸ್ವಾರ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಸಮಾಜದಲ್ಲಿ ಪ್ರತಿಕೆಗಳು ಹಾಗು ಪತ್ರಕರ್ತರು ಅನುಭವಿಸುತ್ತಿರುವ ಸಂಕಷ್ಟಗಳು ಬಹಳಷ್ಟಿವೆ. ಹಲವಾರು ಸಂಕಷ್ಟಗಳ ನಡುವೆಯೂ ಪತ್ರಕರ್ತರು ತಮ್ಮ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಪತ್ರಕರ್ತರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಜೊತೆಗೆ ಏಳಿಗೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ ಮಾತನಾಡಿ, ಸಮಾಜದೊಂದಿಗೆ ಪತ್ರಕರ್ತರು ಗುರುತಿಸಿಕೊಂಡಿರುವ ಪರಿ ಹಾಗು ಪತ್ರಕರ್ತರು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸುವ ಜೊತೆಗೆ ಸಂಘಟನೆಯ ಮಹತ್ವ ತಿಳಿಸಿದರು.
ಪತ್ರಿಕಾಭವನ ಕಟ್ಟಡ ಸಮಿತಿ ಅಧ್ಯಕ್ಷ ಕಣ್ಣಪ್ಪ ಮಾತನಾಡಿ, ಸಮಾಜದಲ್ಲಿ ಪತ್ರಕರ್ತರ ಜೊತೆಗೆ ಪತ್ರಿಕೆಗಳು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಿದರು. ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಿಸಿದ್ದರು. ಸುಭಾಷ್ ಸಿಂದ್ಯಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್ ನಿರೂಪಿಸಿದರು. ಹಿರಿಯ ಪತ್ರಕರ್ತ ಬದರಿನಾರಾಯಣ ಶ್ರೇಷ್ಠಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿದರು. ಸಹಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಅನಂತಕುಮಾರ್, ಹಿರಿಯ ಪತ್ರಕರ್ತರಾದ ನಾರಾಯಣ, ಗಣೇಶ್‌ರಾವ್ ಸಿಂಧ್ಯಾ, ಶಿವಶಂಕರ್, ಟಿ.ಎಸ್ ಆನಂದಕುಮಾರ್, ಸುದರ್ಶನ್, ಶೈಲೇಶ್‌ಕೋಠಿ, ಕೆ.ಇ ಪ್ರಶಾಂತ್, ರವೀಂದ್ರನಾಥ್(ಬ್ರದರ್), ಮೋಹನ್‌ಕುಮಾರ್, ಸಯ್ಯದ್‌ಖಾನ್ ಹಾಗು ಆರ್ಯವೈಶ್ಯ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.
No comments:
Post a Comment