ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯ ನಗರಾಡಳಿತ ವಿಭಾಗದ ಉದ್ಯೋಗಿ ರಮೇಶ್ ಕರ್ನಾಟಕ ಲೆದರ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್(ಲಿಡ್ಕರ್)ಗೆ ಎರವಲು ಉದ್ಯೋಗಿಯಾಗಿ ಸೇರ್ಪಡೆಗೊಂಡ ಹಿನ್ನಲೆಯಲ್ಲಿ ಅವರನ್ನು ಮಂಗಳವಾರ ನಗರಾಡಳಿತ ವಿಭಾಗದಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಜು. ೨೦: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ನಗರಾಡಳಿತ ವಿಭಾಗದ ಉದ್ಯೋಗಿ ರಮೇಶ್ ಕರ್ನಾಟಕ ಲೆದರ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್(ಲಿಡ್ಕರ್)ಗೆ ಎರವಲು ಉದ್ಯೋಗಿಯಾಗಿ ಸೇರ್ಪಡೆಗೊಂಡ ಹಿನ್ನಲೆಯಲ್ಲಿ ಅವರನ್ನು ಮಂಗಳವಾರ ನಗರಾಡಳಿತ ವಿಭಾಗದಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಎಂಪಿಎಂ ಕಾರ್ಖಾನೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ನೌಕರರನ್ನು ವಿವಿಧ ನಿಗಮ-ಮಂಡಳಿಗಳಲ್ಲಿ ಎರವಲು ಸೇವೆಗೆ ನಿಯೋಜನೆಗೊಳಿಸಲು ಆದೇಶಿಸಿದ್ದು, ಈಗಾಗಲೇ ಬಹುತೇಕ ಉದ್ಯೋಗಿಗಳು ವಿವಿಧ ನಿಗಮ ಮಂಡಳಿಗಳಲ್ಲಿ ಎರವಲು ಸೇವೆಗೆ ನಿಯೋಜನೆಗೊಂಡಿದ್ದಾರೆ.
ನಗರಾಡಳಿತ ವಿಭಾಗದಲ್ಲಿ ಉದ್ಯೋಗಿಯಾಗಿರುವ ರಮೇಶ್‌ರವರು ಲಿಡ್ಕರ್ ಬೆಳಗಾವಿ ಶಾಖೆಯಲ್ಲಿ ಎರವಲು ಸೇವೆಗೆ ನಿಯೋಜನೆಗೊಂಡಿದ್ದಾರೆ. ಇವರನ್ನು ನಗರಾಡಳಿತಾಧಿಕಾರಿ ಸತೀಶ್, ನಗರಸಭೆ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಸಹದ್ಯೋಗಿ ಎಪಿಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.
No comments:
Post a Comment