ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸುಮಾರು ೨ ಗಂಟೆಗೂ ಹೆಚ್ಚು ಸಮಯ ವಿಐಎಸ್‌ಎಲ್ ನಗರಾಡಳಿತ ಅಧಿಕಾರಿಗಳೊಂದಿಗೆ ಸ್ಥಳೀಯ ನಗರಸಭಾ ಸದಸ್ಯರು ಹಾಗು ಮುಖಂಡರು ವಾಗ್ವಾದ ನಡೆಸಿದ ಘಟನೆ ಗುರುವಾರ ನಡೆಯಿತು.
ಭದ್ರಾವತಿ, ಜು. ೨೨: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸುಮಾರು ೨ ಗಂಟೆಗೂ ಹೆಚ್ಚು ಸಮಯ ವಿಐಎಸ್‌ಎಲ್ ನಗರಾಡಳಿತ ಅಧಿಕಾರಿಗಳೊಂದಿಗೆ ಸ್ಥಳೀಯ ನಗರಸಭಾ ಸದಸ್ಯರು ಹಾಗು ಮುಖಂಡರು ವಾಗ್ವಾದ ನಡೆಸಿದ ಘಟನೆ ಗುರುವಾರ ನಡೆಯಿತು.
ವಿಐಎಸ್‌ಎಲ್ ಕಾರ್ಖಾನೆಯ ನಗರಾಡಳಿತ ವ್ಯಾಪ್ತಿಯ ನ್ಯೂಕಾಲೋನಿ, ನ್ಯೂಟೌನ್, ವಿದ್ಯಾಮಂದಿರ, ಜನ್ನಾಪುರ, ಹುತ್ತಾಕಾಲೋನಿ ಸೇರಿದಂತೆ ವಿವಿದೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನಗರಾಡಳಿತ ಇಲಾಖೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಸುವಲ್ಲಿ ವಿಫಲವಾಗಿದೆ. ಹಲವು ಬಾರಿ ಈ ಸಂಬಂಧ ನಗರಾಡಳಿತ ಇಲಾಖೆ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆಯ ನಗರಾಡಳಿತಾಧಿಕಾರಿ ಹಾಗು ಸಾರ್ವಜನಿಕ ಸಂಪರ್ಕಾಧಿಕಾರಿಗಳು ನೀರು ಪೂರೈಕೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ತಿಳಿಸುವ ಜೊತೆಗೆ ಅಸಹಾಯಕತೆಯನ್ನು ವ್ಯಕ್ತಪಡಿಸಿದರು. ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಮಧ್ಯ ಪ್ರವೇಶಿಸಿ ಸ್ಥಳೀಯವಾಗಿ ಎದುರಾಗಿರುವ ಸಮಸ್ಯೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವ ಜೊತೆಗೆ ಸಮರ್ಪಕವಾಗಿ ನೀರು ಪೂರೈಕೆಗೆ ಮುಂದಾಗುವಂತೆ ಸೂಚಿಸಿದರು. ಇದಕ್ಕೆ ಅಧಿಕಾರಿಗಳಿಂದಲೂ ಪೂರಕ ಸ್ಪಂದನೆ ವ್ಯಕ್ತವಾಯಿತು.
ಈ ಭಾಗದ ವ್ಯಾಪ್ತಿಯ ನಗರಸಭಾ ಸದಸ್ಯರಾದ ಲತಾ ಚಂದ್ರಶೇಖರ್, ಆರ್. ಮೋಹನ್‌ಕುಮಾರ್, ಕಾಂತರಾಜ್, ಮುಖಂಡರಾದ ಎಸ್.ಎಸ್ ಭೈರಪ್ಪ, ಉಮೇಶ್, ದಿಲೀಪ್, ಎನ್. ರಾಮಕೃಷ್ಣ ಹಾಗು ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment