ತುಮಕೂರಿನಲ್ಲಿ ಶ್ರೀ ಸಿದ್ದಗಂಗಾ ಮಠದ ನೇತೃತ್ವದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ 'ಶ್ರೀ ಸಿದ್ದಗಂಗ ಅರಣ್ಯ' ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಭದ್ರಾವತಿ, ಜು. ೩೧: ತುಮಕೂರಿನ ಶ್ರೀ ಸಿದ್ದಗಂಗಾ ಮಠದ ನೇತೃತ್ವದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ 'ಶ್ರೀ ಸಿದ್ದಗಂಗ ಅರಣ್ಯ' ನಿರ್ಮಾರ್ಣಕ್ಕೆ ಚಾಲನೆ ನೀಡಲಾಯಿತು.
ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ೨ ಎಕರೆ ಜಾಗದಲ್ಲಿ ಸುಮಾರು ೧೦ ಸಾವಿರ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಅಲ್ಲದೆ ಸವಿ ನೆನಪಿಗಾಗಿ 'ರಕ್ತದಾನ ಶಿಬಿರ' ಆಯೋಜಿಸಲಾಗಿತ್ತು.
ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ಮನೋಹರ್ ಅಬ್ಬಿಗೆರೆ, ರಾಜ್ಯ ಕಾರ್ಯದರ್ಶಿ ಪ್ರಶಾಂತ್, ಭದ್ರಾವತಿ ಘಟಕದ ಅಧ್ಯಕ್ಷ ಎಚ್. ಮಂಜುನಾಥ್ ಕಾರ್ಯದರ್ಶಿ ಕೆ.ಆರ್ ಆನಂದ್, ಖಜಾಂಚಿ ಬಿ.ಎಂ ರಮೇಶ್ ಹಾಗೂ ಮಂಡ್ಯ ಪ್ರದೀಪ್, ಅರುಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment