ಬಹಳ ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದ ಭದ್ರಾವತಿ ನಗರಸಭೆ ೨೨ನೇ ವಾರ್ಡ್ ವ್ಯಾಪ್ತಿಯ ಬಡಕುಟುಂಬವೊಂದಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಭದ್ರಾವತಿ, ಜು. ೨: ಬಹಳ ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದ ಕುಟುಂಬವೊಂದಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ವಾರ್ಡ್ ನಂ. ೨೨ರ ಉಜ್ಜನಿಪುರದಲ್ಲಿ ಬಡ ಕುಟುಂಬವೊಂದು ಸುಮಾರು ೪೦ ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ವಂಚಿತವಾಗಿದ್ದು, ಈ ಮಾಹಿತಿ ಅರಿತ ತಕ್ಷಣ ಶಾಸಕರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಜೊತೆಗೆ ಸುಮಾರು ೨೦ ಸಾವಿರ ರು. ಸ್ವಂತ ಹಣದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವ ಮೂಲಕ ಬಡ ಕುಟುಂಬಕ್ಕೆ ನೆರವಾಗಿದ್ದಾರೆ.
ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಸುದೀಪ್‌ಕುಮಾರ್, ನಗರಸಭೆ ಮಾಜಿ ಸದಸ್ಯ ವೆಂಕಟಯ್ಯ ಸೇರಿದಂತೆ ಸ್ಥಳೀಯ ಮುಖಂಡರು, ನಿವಾಸಿಗಳು ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
No comments:
Post a Comment