ಎಸ್.ಜೆ ಮಹೇಶ್ವರ
ಭದ್ರಾವತಿ, ಜು. ೫: ತಾಲೂಕು ಸರ್ಕಾರಿ 'ಡಿ' ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಎಸ್.ಜೆ ಮಹೇಶ್ವರ(೪೩) ಸೋಮವಾರ ನಿಧನ ಹೊಂದಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. ಪತ್ನಿ, ಇಬ್ಬರು ಮಕ್ಕಳು ಇದ್ದರು. ಮಹೇಶ್ವರ ತಾಲೂಕಿನ ಅರಬಿಳಚಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 'ಡಿ' ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಮಾಜಿ ಅಧ್ಯಕ್ಷ ಎನ್. ಕೃಷ್ಣಪ್ಪ, ನಿಲೇಶ್‌ರಾಜ್ ಹಾಗು ಸರ್ಕಾರಿ ಆಸ್ಪತ್ರೆ 'ಡಿ' ಗ್ರೂಪ್ ನೌಕರರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment