ಭದ್ರಾವತಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಗಳನ್ನು ಗುರುತಿಸಿ ಬೌಂಡರಿ ನಿಗದಿಪಡಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಆರ್. ಪ್ರದೀಪ್‌ಗೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೨೭: ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಗಳನ್ನು ಗುರುತಿಸಿ ಬೌಂಡರಿ ನಿಗದಿಪಡಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಆರ್. ಪ್ರದೀಪ್‌ಗೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಈಗಾಗಲೇ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯಲ್ಲಿ ಸುಮಾರು ೭೦ ಕೆರೆಗಳು ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೨೦ ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಆದೇಶವಾಗಿರುತ್ತದೆ. ಕೆರೆ ಸಮೀಪದ ರೈತರು ಸ್ವಇಚ್ಛೆಯಿಂದ ಸರ್ಕಾರದ ಯಾವುದೇ ಅನುದಾನವಿಲ್ಲದೆ ಕೆರೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ನಗರಸಭೆ ಹಾಗು ಗ್ರಾಮ ಪಂಚಾಯಿತಿ ಆಡಳಿತಗಳಿಗೆ ಟ್ರಸ್ಟ್ ಹಾಗು ವೇದಿಕೆ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.
ತಾಂತ್ರಿಕ ಕಾರಣಗಳಿಂದಾಗಿ ತಾಲೂಕು ಆಡಳಿತದಿಂದ ನಗರಸಭೆ ಹಾಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಟ್ಟೆಗಳನ್ನು ಅಳತೆ ಮಾಡಿ ಬೌಂಡರಿ ನಿಗದಿಪಡಿಸಿರುವುದಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಕೆರೆಗಳಂತೆ ಕಟ್ಟೆಗಳನ್ನು ಅಭಿವೃದ್ಧಿಪಡಿಸಬೇಕು. ಇದರಿಂದಾಗಿ ಅಂತರ್ಜಲ ಹೆಚ್ಚುವ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ, ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಲಾಗಿದೆ.
ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕಾರ್ಯಾಧ್ಯಕ್ಷೆ ರಮಾ ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ದೇವಿಕಾ ನಾಗರಾಜ್, ಕಾರ್ಯದರ್ಶಿ ಶೈಲಜಾ ರಾಮಕೃಷ್ಣ ಉಪಸ್ಥಿತರಿದ್ದರು.
No comments:
Post a Comment