ಸಂಕಷ್ಟಕ್ಕೆ ಒಳಗಾಗಿರುವ ಮಕ್ಕಳ ರಕ್ಷಣೆಯಲ್ಲಿ ನಿರಂತರವಾಗಿ ತೊಡಗಿರುವ ಶಿವಮೊಗ್ಗದ ಮಕ್ಕಳ ಸಹಾಯವಾಣಿ ೧೦೯೮ ವತಿಯಿಂದ ನಗರಸಭೆ ವ್ಯಾಪ್ತಿಯ ಭದ್ರಾವತಿ ಬೊಮ್ಮನಕಟ್ಟೆಯಲ್ಲಿ ಬಡ ಮಕ್ಕಳಿಗೆ ದಿನಸಿ ಸಾಮಗ್ರಿ ವಿತರಣೆ ಹಾಗು ಜಾಗೃತಿ ಕಾರ್ಯಕ್ರಮ ನಡೆಯಿತು.
ಭದ್ರಾವತಿ, ಜು. ೧೫: ಸಂಕಷ್ಟಕ್ಕೆ ಒಳಗಾಗಿರುವ ಮಕ್ಕಳ ರಕ್ಷಣೆಯಲ್ಲಿ ನಿರಂತರವಾಗಿ ತೊಡಗಿರುವ ಶಿವಮೊಗ್ಗದ ಮಕ್ಕಳ ಸಹಾಯವಾಣಿ ೧೦೯೮ ವತಿಯಿಂದ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ಬಡ ಮಕ್ಕಳಿಗೆ ದಿನಸಿ ಸಾಮಗ್ರಿ ವಿತರಣೆ ಹಾಗು ಜಾಗೃತಿ ಕಾರ್ಯಕ್ರಮ ನಡೆಯಿತು.
ಮಕ್ಕಳು ಯಾವುದೇ ರೀತಿಯಲ್ಲಿ ಸಂಕಷ್ಟಕ್ಕೆ ಒಳಗಾದಲ್ಲಿ ತಕ್ಷಣ ಸಹಾಯವಾಣಿ ೧೦೯೮ ಸಂಖ್ಯೆಗೆ ಕರೆ ಮಾಡುವ ಮೂಲಕ ನೆರವನ್ನು ಪಡೆಯಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಲಾಯಿತು.
ಕಾರ್ಯಕ್ರಮವನ್ನು ನಗರಸಭಾ ಸದಸ್ಯ ಕೋಟೇಶ್ವರರಾವ್ ಉದ್ಘಾಟಿಸಿದರು. ಶಿವಮೊಗ್ಗ ಶಾಂತಿನಗರದ ಗುರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಎನ್‌ಎಸ್‌ಎಸ್ ನಿರ್ದೇಶಕ ಪಾದರ್ ಅಬ್ರಹಂ, ಸಹ ನಿರ್ದೇಶಕ ಪಾದರ್ ಜೋಸ್, ಯೋಜನಾ ವ್ಯವಸ್ಥಾಪಕಿ ಸಿಸ್ಟರ್ ಸುಪ್ರಿಯಾ, ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಕವಿತಾ, ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಎ. ತಿಪ್ಪೇಸ್ವಾಮಿ, ಸಹಾಯವಾಣಿ ಕೇಂದ್ರದ ತಾಲೂಕು ಸಂಯೋಜಕರಾದ ಪ್ರಮೋದ್ ಮತ್ತು ಸುಮಿತ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment