ಕಟ್ಟಡ ಮಾಲೀಕರೊಂದಿಗೆ ಮಾತುಕತೆ ನಡೆಸಿ ತಲಾ ೫ ಲಕ್ಷ ರು. ಪರಿಹಾರ ಕೊಡಿಸಿದ ಶಾಸಕ ಬಿ.ಕೆ ಸಂಗಮೇಶ್ವರ್
ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಭದ್ರಾವತಿ ಅಶ್ವಥ್‌ನಗರದ ಇಬ್ಬರು ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ತಲಾ ೫ ಲಕ್ಷ ರು. ಪರಿಹಾರದ ಚೆಕ್ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ವಿತರಿಸಿದರು.
ಭದ್ರಾವತಿ, ಜು. ೧೨: ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಇಬ್ಬರು ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ತಲಾ ೫ ಲಕ್ಷ ರು. ಪರಿಹಾರದ ಚೆಕ್ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ವಿತರಿಸಿದರು.
ನಗರದ ಹೊಸಮನೆ ಅಶ್ವಥ್‌ನಗರದ ಇಬ್ಬರು ಕಟ್ಟಡ ಕಾರ್ಮಿಕರು ಇತ್ತೀಚೆಗೆ ಶಿವಮೊಗ್ಗದಲ್ಲಿ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಾಗ ಮೃತಪಟ್ಟಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್ ಮೃತಪಟ್ಟ ಬಡ ಕಾರ್ಮಿಕರ ಕುಟುಂಬಗಳಿಗೆ ಕಟ್ಟಡ ಮಾಲೀಕರೊಂದಿಗೆ ಮಾತುಕತೆ ನಡೆಸಿ ತಲಾ ೫ ಲಕ್ಷ ರು. ಪರಿಹಾರಕ್ಕೆ ಒತ್ತಾಯಿಸಿದ್ದರು.
ನಗರಸಭಾ ಸದಸ್ಯರಾದ ಜಾರ್ಜ್, ಚನ್ನಪ್ಪ, ಕೆ. ಸುದೀಪ್‌ಕುಮಾರ್, ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ನಾಗೇಂದ್ರ ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ನಿಯೋಜಿತ ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಮಂಜು, ಸಲಹೆಗಾರ ಸಂಪತ್ ಕುಮಾರ್, ಪೈಂಟರ್ ಸಂಘದ ಗೌರವಾಧ್ಯಕ್ಷ ಶಿವಣ್ಣ, ಅಧ್ಯಕ್ಷ ಶ್ರೀನಿವಾಸ್ ಹಾಗು ಪದಾಧಿಕಾರಿಗಳು, ಇಂಜಿನಿಯರ್ ಲಕ್ಷಣ್, ರವಿಕುಮಾರ್, ಸರವಣ ಮೇಸ್ತ್ರಿ ಮತ್ತು ಟೈಲ್ಸ್ ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment