ಭದ್ರಾವತಿ, ಜು. ೨೦: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಕಳೆದ ೩-೪ ದಿನಗಳಿಂದ ೧೦ರ ಗಡಿ ದಾಟಿದ್ದು, ಮಂಗಳವಾರ ೧೩ ಪ್ರಕರಣಗಳು ಪತ್ತೆಯಾಗಿವೆ.
ಒಟ್ಟು ೬೭೨ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೩ ಜನರಲ್ಲಿ ಸೋಂಕು ದೃಢಪಟ್ಟಿದೆ. ೭ ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ತಾಲೂಕಿನಲ್ಲಿ ಒಟ್ಟು ೭೫೧೪ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೭೪೬೦ ಜನರು ಗುಣಮುಖರಾಗಿದ್ದಾರೆ. ೫೪ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿದ್ದು, ಇದುವರೆಗೂ ಸೋಂಕಿಗೆ ೧೫೫ ಜನ ಬಲಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ೨ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ಇದುವರೆಗೂ ೧೭೦ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.
No comments:
Post a Comment