ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಉದ್ಘಾಟಿಸಿದರು.
ಭದ್ರಾವತಿ, ಜು. ೧೬: ಪ್ರಸ್ತುತ ದೇಶದಲ್ಲಿ ಜನಸಂಖ್ಯೆ ನಿಯಂತ್ರಣದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತಿರಾಗಬೇಕಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಹೇಳಿದರು.
ಅವರು ಶುಕ್ರವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜನಸಂಖ್ಯೆ ಹೆಚ್ಚಳದಿಂದ ಲಿಂಗಾನುಪಾತ ಉಂಟಾಗುವ ಜೊತೆಗೆ ದೇಶದಲ್ಲಿ ಹಲವಾರು ಸಮಸ್ಯೆಗಳು ಎದುರಾಗಲಿವೆ ಎಂದು ವಿವರಿಸಿದರು.
ಕಾರ್ಯಕ್ರಮವನ್ನು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಉದ್ಘಾಟಿಸಿದರು. ಸರ್ಜನ್ ಡಾ. ಶಿವಪ್ರಕಾಶ್ ಮತ್ತು ಸ್ತ್ರೀ ರೋಗ ತಜ್ಞೆ ಡಾ. ವರ್ಷ ಮಾತನಾಡಿ, ಜನಸಂಖ್ಯಾ ನಿಯಂತ್ರಣದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ರೇವತಿ, ಆನಂದ ಮೂರ್ತಿ, ರಾಜೇಗೌಡ, ವಸಂತ ಹಾಗೂ ನೇತ್ರಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment