ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ನೂತನ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಮೈಕ್ರೋ ಸ್ಮಾಲ್ & ಮೀಡಿಯಾ ಎಂಟರ್‌ಪ್ರೈಸಸ್ ಪ್ರೊಮೋಷನಲ್ ಕೌನ್ಸಿಲ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ, ಜು. ೮: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ನೂತನ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ೪ ಸಂಸದರನ್ನು ಮೈಕ್ರೋ ಸ್ಮಾಲ್ & ಮೀಡಿಯಾ ಎಂಟರ್‌ಪ್ರೈಸಸ್ ಪ್ರೊಮೋಷನಲ್ ಕೌನ್ಸಿಲ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಸನ್ಮಾನಿಸಿ ಅಭಿನಂದಿಸಿದರು.
ಯುವ ಉದ್ಯಮಿ ಹಾಗು ಪ್ರೊಮೋಷನಲ್ ಕೌನ್ಸಿಲ್ ಕೇಂದ್ರ ಘಟಕದ ನಿರ್ದೇಶಕರೂ ಸಹ ಆಗಿರುವ ಎಚ್.ಸಿ ರಮೇಶ್, ರಾಜ್ಯದಲ್ಲಿ ಮೈಕ್ರೋ ಸ್ಮಾಲ್ & ಮೀಡಿಯಾ ಎಂಟರ್‌ಪ್ರೈಸಸ್ ಬೆಳವಣಿಗೆಗೆ ಕಳೆದ ಸುಮಾರು ಒಂದೂವರೆ ವರ್ಷದಿಂದ ಶ್ರಮಿಸುತ್ತಿದ್ದು, ನೂತನ ಸಚಿವರಾದ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ ಹಾಗು ಎ. ನಾರಾಯಣಸ್ವಾಮಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ, ಅಭಿನಂದಿಸುವ ಜೊತೆಗೆ ಕೇಂದ್ರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವ ಜೊತೆಗೆ ರಾಜ್ಯದಲ್ಲಿ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸುವಂತೆ ಮನವಿ ಮಾಡಿದರು.
No comments:
Post a Comment