ಕೋವಿಡ್-೧೯ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಭದ್ರಾವತಿ ನಗರದ ಬಜರಂಗದಳ ಕಾರ್ಯಕರ್ತರನ್ನು ತಾಲೂಕು ಸವಿತಾ ಸಮಾಜದ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜು. ೪: ಕೋವಿಡ್-೧೯ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ನಗರದ ಬಜರಂಗದಳ ಕಾರ್ಯಕರ್ತರನ್ನು ತಾಲೂಕು ಸವಿತಾ ಸಮಾಜದ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಸಮಾಜದ ಅಧ್ಯಕ್ಷ ವಿಶ್ವನಾಥ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮುಖರು, ಬಜರಂಗದಳ ಕಾರ್ಯಕರ್ತರ ಸೇವೆಗೆ ಯಾರಿಂದಲೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಅಲ್ಲದೆ ಸೇವಾ ಕಾರ್ಯ ಭವಿಷ್ಯದ ಯುವ ಪೀಳಿಗೆಗೆ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ನಗರಸಭೆ ೬ನೇ ವಾರ್ಡ್‌ಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯ ಆರ್. ಶ್ರೇಯಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಂ. ಪರಮೇಶ್ ಹಾಗು ಸವಿತಾ ಸಮಾಜದ ಪದಾಧಿಕಾರಿಗಳು ಹಾಗು ಯುವ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment