ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿ ಹಿಂದಿಗುತ್ತಿರುವ ವಿದ್ಯಾರ್ಥಿಗಳು.
ಭದ್ರಾವತಿ, ಜು. ೧೯: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೋಮವಾರ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನಾದ್ಯಂತ ಯಶಸ್ವಿಯಾಗಿದ್ದು, ಸುಮಾರು ೪೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಗಮನ ಸೆಳೆದರು.
ಮೊದಲ ಬಾರಿಗೆ ಪರೀಕ್ಷಾ ಮಂಡಳಿ ನಡೆಸಿದ ಓ.ಎಂ.ಆರ್ ಗುರುತು ಮಾಡುವ ಹೊಸ ಮಾದರಿ ಪರೀಕ್ಷೆಗೆ ಪೂರಕ ಸ್ಪಂದನೆ ವ್ಯಕ್ತವಾಗಿದ್ದು, ವಿಷಯ-೧ಕ್ಕೆ ೪,೫೧೮, ವಿಷಯ-೨ಕ್ಕೆ ೪,೩೯೧ ಮತ್ತು ವಿಷಯ-೩ಕ್ಕೆ ೪,೨೬೧ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಈ ಪೈಕಿ ವಿಷಯ-೧ಕ್ಕೆ ೧೮, ವಿಷಯ-೨ಕ್ಕೆ ೧೪ ಹಾಗು ವಿಷಯ-೩ಕ್ಕೆ ೧೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಅನಾರೋಗ್ಯದಿಂದ ಓರ್ವ ವಿದ್ಯಾರ್ಥಿ ವಿಶೇಷ ಕೊಠಡಿಯಲ್ಲಿ ಹಾಗು ಕೊರೋನಾ ಸೋಂಕಿಗೆ ಒಳಗಾದ ಓರ್ವ ವಿದ್ಯಾರ್ಥಿ ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಪರೀಕ್ಷೆ ಬರೆದಿದ್ದು, ವಸತಿ ನಿಲಯಗಳ ೨೦ ವಿದ್ಯಾರ್ಥಿಗಳು ಹಾಗು ೬೧ ವಲಸೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಮುಂಜಾಗ್ರತೆ ವಹಿಸಲಾಯಿತು.
No comments:
Post a Comment